ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತ 30 ಲಕ್ಷ ಮನೆಗಳನ್ನು ಮೇಲ್ಛಾವಣಿ ಸೌರಶಕ್ತಿಯೊಂದಿಗೆ ಸಬಲೀಕರಣಗೊಳಿಸಿದ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಶುದ್ಧ ಇಂಧನ ಪಯಣದಲ್ಲಿ ಶ್ಲಾಘನೀಯ ಮೈಲಿಗಲ್ಲುಎಂದು ಬಣ್ಣಿಸಿದ್ದಾರೆ.
ಮೇಲ್ಛಾವಣಿ ಸೌರಶಕ್ತಿಯನ್ನು ಅಳವಡಿಸಿಕೊಂಡಿರುವ ಎಲ್ಲಾ ಫಲಾನುಭವಿಗಳನ್ನು ಅಭಿನಂದಿಸಿದ ಪ್ರಧಾನಮಂತ್ರಿ ಅವರು, ಈ ಉಪಕ್ರಮವು ನಾಗರಿಕರಲ್ಲಿ ಉಳಿತಾಯ, ಸುಸ್ಥಿರತೆ ಮತ್ತು ಸ್ವಾವಲಂಬನೆಯನ್ನು ಹೆಚ್ಚಿಸುತ್ತಿದೆ ಎಂದು ಹೇಳಿದರು.
ಈ ಯೋಜನೆಯು ಇಂಧನ-ಸುರಕ್ಷಿತ, ಹಸಿರು ಮತ್ತು ಭವಿಷ್ಯಕ್ಕೆ ಸಿದ್ಧವಾದ ಭಾರತವನ್ನು ನಿರ್ಮಿಸುವ ಸರ್ಕಾರದ ಪ್ರಯತ್ನಗಳ ಅವಿಭಾಜ್ಯ ಅಂಗವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು.
ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು;
ಭಾರತದ ಶುದ್ಧ ಇಂಧನ ಪ್ರಯಾಣದಲ್ಲಿಒಂದು ಶ್ಲಾಘನೀಯ ಮೈಲಿಗಲ್ಲಾಗಿದೆ!
ಈ ಯೋಜನೆಯಿಂದ ಪ್ರಯೋಜನ ಪಡೆದ ಮತ್ತು ಮೇಲ್ಛಾವಣಿ ಸೌರಶಕ್ತಿಯನ್ನು ಅಳವಡಿಸಿಕೊಂಡ ಎಲ್ಲರಿಗೂ ಅಭಿನಂದನೆಗಳು, ಆ ಮೂಲಕ ಉಳಿತಾಯ, ಸುಸ್ಥಿರತೆ ಮತ್ತು ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ.
ಈ ಯೋಜನೆಯು ಇಂಧನ-ಸುರಕ್ಷಿತ, ಹಸಿರು ಮತ್ತು ಭವಿಷ್ಯಕ್ಕೆ ಸಿದ್ಧವಾದ ಭಾರತವನ್ನು ನಿರ್ಮಿಸುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ.
#30LakhsPMSuryaGhar”
*****
A commendable milestone in India’s clean energy journey!
— Narendra Modi (@narendramodi) February 23, 2026
Compliments to all those who have benefitted from this scheme and embraced rooftop solar power thereby boosting savings, sustainability and self-reliance.
This scheme is a part of our efforts to build an energy-secure,… https://t.co/BLcCKAug4h