Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರವಾಹ ಪೀಡಿತ ವಿವಿಧ ರಾಜ್ಯಗಳಿಗೆ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರವಾಹ ಪೀಡಿತ ಉತ್ತರಪ್ರದೇಶ, ಬಿಹಾರ, ಉತ್ತರಾಖಂಡ್, ರಾಜಾಸ್ತಾನ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ರಕ್ಷಣೆ ಮತ್ತು ಪರಿಹಾರ ಕಾಮಗಾರಿ ಕೈಗೊಳ್ಳಲು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಜನರ ಒಳಿತಿಗಾಗಿ ಪ್ರಾರ್ಥಿಸಿರುವ ಪ್ರಧಾನಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿ ಆದಷ್ಟು ಬೇಗ ಸಹಜ ಸ್ಥಿತಿಯತ್ತ ಮರಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಾನು ಪ್ರವಾಹದಿಂದ ತತ್ತರಿಸಿರುವ ಯುಪಿ, ಬಿಹಾರ್, ಉತ್ತರಾಖಂಡ್, ರಾಜಾಸ್ತಾನ ಮತ್ತು ಎಂ.ಪಿ.ಯ ಪ್ರದೇಶಗಳ ಜನತೆಯ ಸುರಕ್ಷತೆ ಮತ್ತು ಒಳಿತಿಗಾಗಿ ಪ್ರಾರ್ಥಿಸುತ್ತೇನೆ.

ಗೃಹ ಸಚಿವ ಶ್ರೀ ರಾಜನಾಥ ಸಿಂಗ್ ಜಿ ಅವರು ಪರಿಸ್ಥಿತಿಯ ಬಗ್ಗೆ ಸೂಕ್ಷ್ಮ ನಿಗಾ ವಹಿಸಿದ್ದಾರೆ. ಅವರು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚಾರಣೆಯ ಮಾಹಿತಿ ಪಡೆದಿದ್ದಾರೆ.

ಕೇಂದ್ರ ಸರ್ಕಾರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ನೀಡಲಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿ ಆದಷ್ಟು ಬೇಗ ಸಹಜ ಸ್ಥಿತಿಯತ್ತ ಮರಳಲಿದೆ ಎಂಬ ವಿಶ್ವಾಸ ನನಗಿದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***