ಪಿಎಂಇಂಡಿಯಾ
ಪಿಲಿಪ್ಪೀನ್ಸ್ ನ ಮಿಂಡನಾವೊದಲ್ಲಿ ಇಂದು ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಪ್ರಧಾನಮಂತ್ರಿ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.
ಭಾರತವು ಫಿಲಿಪ್ಪೀನ್ಸ್ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ದೃಢಪಡಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
“ಫಿಲಿಪ್ಪೀನ್ಸ್ ನ ಮಿಂಡನಾವೊದಲ್ಲಿ ಇಂದು ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಭಾರತವು ಪಿಲಿಪ್ಪೀನ್ಸ್ ಸರ್ಕಾರ ಮತ್ತು ಜನತೆಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ.
@bongbongmarcos”
*****
Saddened by the loss of lives and destruction caused by today’s earthquake in Mindanao, Philippines. My heartfelt condolences to the bereaved families and prayers for the speedy recovery of those injured. India stands in solidarity with the people and the Government of the…
— Narendra Modi (@narendramodi) June 8, 2026