Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಮಾಲೋಚನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆ ಶಮನಗೊಳಿಸುವ ಮತ್ತು ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳುವ ತುರ್ತು ಅಗತ್ಯದ ಕುರಿತು ಸಮಾಲೋಚನೆ ನಡೆಸಿದರು. ಆ ಪ್ರದೇಶದಲ್ಲಿ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ತಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಎದುರು ನೋಡುತ್ತಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ಸಂವಾದ ಮತ್ತು ರಾಜತಾಂತ್ರಿಕತೆಗೆ ಮರಳುವ ಕುರಿತು ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಸಮಾಲೋಚನೆ ನಡೆಸಿದನು.

ಆ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ.’’

 

*****