Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಫ್ರಾನ್ಸ್‌ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು


ಫ್ರಾನ್ಸ್‌ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಶ್ರೀ ಇಮ್ಯಾನುಯೆಲ್‌ ಬೊನ್ನೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ಸಂಬಂಧ ಎಕ್ಸ್‌ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:

ಅಧ್ಯಕ್ಷರಾದ  ಮ್ಯಾಕ್ರನ್‌ ಅವರ ರಾಜತಾಂತ್ರಿಕ ಸಲಹೆಗಾರ ಇಮ್ಯಾನುಯೆಲ್‌ ಬೊನ್ನೆ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ.

ಬಹು ಕ್ಷೇತ್ರಗಳಲ್ಲಿ ನಿಕಟ ಸಹಕಾರದಿಂದ ಗುರುತಿಸಲ್ಪಟ್ಟ ಬಲವಾದ ಮತ್ತು ವಿಶ್ವಾಸಾರ್ಹ ಭಾರತ-ಫ್ರಾನ್ಸ್‌ ಕಾರ್ಯತಂತ್ರದ ಪಾಲುದಾರಿಕೆಯನ್ನು ಪುನರುಚ್ಚರಿಸಲಾಯಿತು. ನಮ್ಮ ಸಹಯೋಗವು ನಾವೀನ್ಯತೆ, ತಂತ್ರಜ್ಞಾನ ಮತ್ತು ಶಿಕ್ಷಣಕ್ಕೆ ವಿಸ್ತರಿಸುವುದನ್ನು ನೋಡಲು ಉತ್ತೇಜನಕಾರಿಯಾಗಿದೆ, ವಿಶೇಷವಾಗಿ ನಾವು ಭಾರತ-ಫ್ರಾನ್ಸ್‌ ನಾವೀನ್ಯತೆಯ ವರ್ಷವನ್ನು ಆಚರಿಸುತ್ತಿದ್ದೇವೆ. ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು. ಶೀಘ್ರದಲ್ಲೇ ಅಧ್ಯಕ್ಷ  ಮ್ಯಾಕ್ರನ್‌ ಅವರನ್ನು ಭಾರತಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇನೆ.

@EmmanuelMacron” 

 

*****