Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಸ್ ಅಪಘಾತದಲ್ಲಿ ಅಮರನಾಥ ಯಾತ್ರಿಕರ ಸಾವಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ; ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದಕ್ಕೆ ಅತೀವ ದುಃಖ ವ್ಯಕ್ತಪಡಿಸಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಬಸ್ ಅಪಘಾತದಿಂದ ಅಮರನಾಥ ಯಾತ್ರಿಕರು ಸಾವಿಗೀಡಾಗಿರುವುದು ಅತೀವ ನೋವು ತಂದಿದೆ. ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.

ಜೆ ಮತ್ತು ಕೆ ಬಸ್ ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

ಬಸ್ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ ..

***

AKT/NT