Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಂಗ್ಲಾದೇಶದ ಸಂಸದೀಯ ಚುನಾವಣೆಗಳಲ್ಲಿ ಬಿಎನ್‌ಪಿಯ  ಗೆಲುವಿಗಾಗಿ ಶ್ರೀ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಂಗ್ಲಾದೇಶದ ಸಂಸದೀಯ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದಿದ್ದಕ್ಕಾಗಿ ಶ್ರೀ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತವು ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ನಮ್ಮ ಬಹುಮುಖಿ ಸಂಬಂಧಗಳನ್ನು ಬಲಪಡಿಸಲು ಮತ್ತು ನಮ್ಮ ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಾನು ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ” ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X  ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

”ಬಾಂಗ್ಲಾದೇಶದ ಸಂಸದೀಯ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದಿದ್ದಕ್ಕಾಗಿ ಶ್ರೀ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಈ ಗೆಲುವು ನಿಮ್ಮ ನಾಯಕತ್ವದಲ್ಲಿ ಬಾಂಗ್ಲಾದೇಶದ ಜನರ ನಂಬಿಕೆಯನ್ನು ಪ್ರದರ್ಶಿಸುತ್ತದೆ.

ಭಾರತವು ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನೀಡುವುದನ್ನು ಮುಂದುವರಿಸುತ್ತದೆ.

ನಮ್ಮ ಬಹುಮುಖಿ ಸಂಬಂಧಗಳನ್ನು ಬಲವರ್ಧನೆಗೊಳಿಸಲು ಮತ್ತು ನಮ್ಮ ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.’’

@trahmanbnp

@bdbnp78

 

*****