Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಂಗ್ಲಾದೇಶ ಚುನಾವಣೆಯಲ್ಲಿ ಜಯ ಸಾಧಿಸಿದ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ; ದ್ವಿಪಕ್ಷೀಯ ಸಂಬಂಧಗಳತ್ತ ಭಾರತದ ಬದ್ಧತೆಯನ್ನು ಪುನರುಚ್ಛರಿಸಿದ್ದಾರೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾರಿಕ್ ರೆಹಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಬಾಂಗ್ಲಾದೇಶ ಚುನಾವಣೆಯಲ್ಲಿ ಅವರ ಐತಿಹಾಸಿಕ ಅದ್ಭುತ ಜಯ ಗಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಪ್ರಧಾನಮಂತ್ರಿಯವರು ದೂರವಾಣಿಯಲ್ಲಿ ತಮ್ಮ ಸಂಭಾಷಣೆ ವೇಳೆ, ಬಾಂಗ್ಲಾದೇಶ ಜನರ ಆಶಯಗಳನ್ನು ಈಡೇರಿಸುವ ಅವರ ಪ್ರಯತ್ನಗಳಿಗೆ ತಮ್ಮ ಶುಭಾಶಯ ಮತ್ತು ಬೆಂಬಲವನ್ನು ತಿಳಿಸಿದರು.

ಎರಡೂ ದೇಶಗಳ ನಡುವಿನ ಸಮೀಪದ ಸ್ನೇಹಪೂರ್ಣ ಸಂಬಂಧಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಭಾರತ ಮತ್ತು ಬಾಂಗ್ಲಾದೇಶವು ಆಳವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಬಾಂಧವ್ಯಗಳಿಂದ ಸಂಪರ್ಕಗೊಂಡಿರುವ  ನೆರೆಹೊರೆಯ ರಾಷ್ಟ್ರಗಳಾಗಿವೆ ಎಂದು ಹೇಳಿದರು. ಎರಡೂ ದೇಶಗಳು ಮತ್ತು ಅಲ್ಲಿನ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಭಾರತದ ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಹೀಗೆ ಬರೆದಿದ್ದಾರೆ:

“ಶ್ರೀ ತಾರಿಕ್ ರೆಹಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು ಸಂತೋಷವಾಯಿತು. ಬಾಂಗ್ಲಾದೇಶ ಚುನಾವಣೆಯಲ್ಲಿ ಅವರ ಗಮನಾರ್ಹ ಜಯಕ್ಕೆ ನಾನು ಅಭಿನಂದನೆ ಸಲ್ಲಿಸಿದ್ದೇನೆ. ಬಾಂಗ್ಲಾದೇಶ ಜನರ ಆಶಯಗಳನ್ನು ಈಡೇರಿಸುವ ಅವರ ಪ್ರಯತ್ನಗಳಿಗೆ ನನ್ನ ಶುಭಾಶಯಗಳು ಮತ್ತು ಬೆಂಬಲವನ್ನು ತಿಳಿಸಿದ್ದೇನೆ.

ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ ಹೊಂದಿರುವ ಹತ್ತಿರದ ನೆರೆಹೊರೆಯ ರಾಷ್ಟ್ರಗಳಾದ ನಾವು, ನಮ್ಮ ಎರಡೂ ದೇಶಗಳ ಜನರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗಾಗಿ ಭಾರತದ ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ.’

@trahmanbnp”

 

*****