Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರದ ನಳಂದದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಬಿಹಾರದ ನಳಂದ ಜಿಲ್ಲೆಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ಸಂಬಂಧ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

“ಬಿಹಾರದ ನಳಂದ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತವು ತೀವ್ರ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi” 

 

*****