Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ತಮ್ಮ ಸಂತಾಪವನ್ನು ತಿಳಿಸಿದ್ದು, ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪ್ರಾಣ ಕಳೆದುಕೊಂಡವರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಹಾಗೂ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನುನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಘೋಷಿಸಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ಸಂದೇಶದಲ್ಲಿ ಈ ರೀತಿ ತಿಳಿಸಿದೆ;

“ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಸಂಭವಿಸಿದ ಜೀವಹಾನಿ ತೀವ್ರ ನೋವುಂಟು ಮಾಡಿದೆ. ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವಾಗಿ ಪ್ರತಿಯೊಬ್ಬ ಮೃತರ ಸನಿಹದ ಸಂಬಂಧಿಕರಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****