Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಬೆಂಗಳೂರಿನ  ಕಲ್ಲು ಗಣಿಗಾರಿಕೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಕರ್ನಾಟಕದ ಬೆಂಗಳೂರು ನಗರ ಜಿಲ್ಲೆಯ ಕಲ್ಲು ಗಣಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವುದು ನೋವು ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi

 

*****