Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬ್ರಹ್ಮಕುಮಾರಿಯರ ಕುಟುಂಬದ 80ನೇ ವಾರ್ಷಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಭಾಷಣ

ಬ್ರಹ್ಮಕುಮಾರಿಯರ ಕುಟುಂಬದ 80ನೇ ವಾರ್ಷಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ  ಪ್ರಧಾನಮಂತ್ರಿ ಭಾಷಣ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬ್ರಹ್ಮಕುಮಾರಿಯರ ಕುಟುಂಬದ 80ನೇ ವಾರ್ಷಿಕೋತ್ಸವ ಉದ್ದೇಶಿಸಿ ಭಾಷಣ ಮಾಡಿದರು.

ದೇಶ ವಿದೇಶಗಳಿಂದ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಆಗಮಿಸಿರುವ ಪ್ರತಿನಿಧಿಗಳನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಸ್ಥಾಪಕ ದಾದಾ ಲೇಖರಾಜ್ ಅವರಿಗೆ ಗೌರವ ನಮನ ಸಲ್ಲಿಸಿದರು. ತಮ್ಮ 100ನೇ ವಯಸ್ಸಿನಲ್ಲೂ ಸಮಾಜದ ಸೇವೆ ಮಾಡುತ್ತಿರುವ ದಾದಿ ಜಾನಕಿ ಜೀ ಅವರನ್ನು ಪ್ರಶಂಸಿಸಿದ ಪ್ರಧಾನಿ, ಅವರನ್ನು ಕರ್ಮಯೋಗಿ ಎಂದು ಬಣ್ಣಿಸಿದರು.

ಸೌರ ಇಂಧನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬ್ರಹ್ಮ ಕುಮಾರಿಯರ ಸಂಸ್ಥೆ ಮಾಡುತ್ತಿರುವ ಕಾರ್ಯವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು. ಭ್ರಷ್ಟಾಚಾರ ತಗ್ಗಿಸಲು ಡಿಜಿಟಲ್ ವಹಿವಾಟು ವಿಸ್ತರಿಸುವಂತೆ ಅವರು ಕರೆ ನೀಡಿದರು.

ಪ್ರಧಾನಮಂತ್ರಿಯವರು ಸ್ವಚ್ಛ ಭಾರತ ಮತ್ತು ಎಲ್.ಇ.ಡಿ. ದೀಪದಂಥ ದ್ಯೇಯಗಳ ಬಗ್ಗೆ ಪ್ರಸ್ತಾಪಿಸಿ, ಅವುಗಳ ಉಪಯೋಗದ ಬಗ್ಗೆಯೂ ಮಾತನಾಡಿದರು.

***

AKT/AK