ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳಲ್ಲಿರುವ ವೈದ್ಯಕೀಯ ನಿಯಂತ್ರಣ ಸಂಸ್ಥೆಗಳ ನಡುವೆ ಮಾನವ ಬಳಕೆಯ ವೈದ್ಯಕೀಯ ಉತ್ಪನ್ನಗಳ ನಿಯಂತ್ರಣ ವಲಯದಲ್ಲಿ ಪರಸ್ಪರ ಸಹಕಾರ ಸಾಧಿಸುವ ಒಪ್ಪಂದಕ್ಕೆ ಸಹಿ ಹಾಕಲು ಅನುಮೋದನೆ ನೀಡಲಾಯಿತು.
ಈ ಒಡಂಬಡಿಕೆಯಿಂದ ಉಭಯ ದೇಶಗಳ ನಡುವಿನ ನಿಯಂತ್ರಣ ಕ್ರಮಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನೆರವಾಗಲಿದೆ ಮತ್ತು ಇದು ಬ್ರಿಕ್ಸ್ ರಾಷ್ಟ್ರಗಳಿಗೆ ಭಾರತ ಮಾಡುತ್ತಿರುವ ವೈದ್ಯಕೀಯ ಸಲಕರಣೆಗಳ ರಫ್ತು ಹೆಚ್ಚಳಕ್ಕೂ ಸಹಕಾರಿಯಾಗಲಿದೆ.