ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಬ್ರೆಜಿಲ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿರುವ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಭಾರತ ಮತ್ತು ಬ್ರೆಜಿಲ್ ನಡುವಿನ ಬಹುಮುಖಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ತಾವು ಉತ್ಸುಕರಾಗಿರುವುದಾಗಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ. ಉಭಯ ರಾಷ್ಟ್ರಗಳು ಒಗ್ಗೂಡಿ, ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಬಲವರ್ಧನೆಗೊಳಿಸುವುದನ್ನು ಮುಂದುವರಿಸುತ್ತವೆ, ‘ಗ್ಲೋಬಲ್ ಸೌತ್’ ರಾಷ್ಟ್ರಗಳ ಸಾಮಾನ್ಯ ಆದ್ಯತೆಗಳನ್ನು ಮುಂದಕ್ಕೆ ಕೊಂಡೊಯ್ಯುತ್ತವೆ ಹಾಗೂ ಹೆಚ್ಚು ಒಳಗೊಳ್ಳುವಿಕೆಯ, ಸಮಾನ ಮತ್ತು ಸುಸ್ಥಿರ ಜಗತ್ತನ್ನು ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸುತ್ತವೆ ಎಂದು ಅವರು ಒತ್ತಿ ಹೇಳಿದರು.
ಪ್ರಧಾನಮಂತ್ರಿ ತಮ್ಮ ಸರಣಿ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“ನನ್ನ ಆತ್ಮೀಯ ಸ್ನೇಹಿತ, ಅಧ್ಯಕ್ಷರಾದ ಲುಲಾ ಅವರಿಗೆ, ಅವರು ಮರುಚುನಾವಣೆಯಲ್ಲಿ ಸಾಧಿಸಿದ ಈ ಅದ್ಭುತ ಗೆಲುವಿಗಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಭಾರತ ಮತ್ತು ಬ್ರೆಜಿಲ್ ನಡುವಿನ ಬಹುಮುಖಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.
ನಾವು ಒಟ್ಟಾರೆ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಬಲಪಡಿಸುವುದನ್ನು ಮುಂದುವರಿಸುತ್ತೇವೆ, ‘ಗ್ಲೋಬಲ್ ಸೌತ್’ನ ಸಾಮಾನ್ಯ ಆದ್ಯತೆಗಳನ್ನು ಉತ್ತೇಜಿಸುತ್ತೇವೆ ಮತ್ತು ಹೆಚ್ಚು ಒಳಗೊಳ್ಳುವಿಕೆಯ, ಸಮಾನ ಹಾಗೂ ಸುಸ್ಥಿರ ಜಗತ್ತನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ.
@LulaOficial”
*****
Heartiest congratulations to my dear friend, President Lula, on his remarkable re-election victory. I look forward to working closely with him to further deepen and expand the multifaceted India-Brazil Strategic Partnership. Together, we will continue to strengthen our cooperation across diverse sectors, advance the shared priorities of the Global South and work towards a more inclusive, equitable and sustainable world. @LulaOficial
— Narendra Modi (@narendramodi) October 26, 2026