Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತದ ಯುವಕರ ಅಪ್ರತಿಮ ಶಕ್ತಿ ಮತ್ತು ಬದ್ಧತೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ


ಭಾರತದ ಯುವ ಪೀಳಿಗೆಯ ಮನೋಭಾವ ಮತ್ತು ದೃಢನಿಶ್ಚಯವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಮುಂಬರುವ ವಿಕಸಿತ ಭಾರತ ಯುವ ನಾಯಕರ ಸಂವಾದದಲ್ಲಿ ರಾಷ್ಟ್ರದ ಯುವಕರೊಂದಿಗೆ ತೊಡಗಿಸಿಕೊಳ್ಳುವ ಉತ್ಸಾಹ ವ್ಯಕ್ತಪಡಿಸಿದರು.

ಭಾರತದ ಯುವಕರು ತಮ್ಮ ಅಪ್ರತಿಮ ಶಕ್ತಿ ಮತ್ತು ಬದ್ಧತೆಯಿಂದ ಬಲಿಷ್ಠ ಮತ್ತು ಸಮೃದ್ಧ ರಾಷ್ಟ್ರ ನಿರ್ಮಿಸುವ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಈ ಸಂವಾದವು ದೇಶಾದ್ಯಂತ ಯುವ ನಾಯಕರಿಗೆ ಆಲೋಚನೆ, ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ವಿಕಸಿತ ಭಾರತದ ದೃಷ್ಟಿಕೋನಕ್ಕೆ ಕೊಡುಗೆ ನೀಡಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ಶ್ರೀ ಮನ್ಸುಖ್ ಮಾಂಡವಿಯಾ ಅವರ ಎಕ್ಸ್ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಹೇಳಿದ್ದಾರೆ:

“अद्भुत जोश और बेमिसाल जज्बे से भरी हमारी युवा शक्ति सशक्त और समृद्ध राष्ट्र के लिए संकल्पबद्ध है। विकसित भारत यंग लीडर्स डायलॉग में देशभर के अपने युवा साथियों से संवाद को लेकर बेहद उत्सुक हूं। इस कार्यक्रम में 12 जनवरी को आप सभी से मिलने वाला हूं।”

 

 

*****