Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಕ್ರೀಡೆ, ತಂತ್ರಜ್ಞಾನ ಮತ್ತು ವನ್ಯಜೀವಿ ಸಂರಕ್ಷಣೆಯ ವಲಯಗಳಲ್ಲಿ ಸಾಧಿಸುತ್ತಿರುವ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ, ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಶ್ರೀ ಕೆವಿನ್ ಪೀಟರ್‌ಸೆನ್ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಶ್ರೀ ಕೆವಿನ್ ಪೀಟರ್‌ಸೆನ್ ಅವರು ಬರೆದ ಲೇಖನವೊಂದನ್ನು ಹಂಚಿಕೊಂಡಿದ್ದಾರೆ.

ಈ ಲೇಖನದಲ್ಲಿ, ಶ್ರೀ ಕೆವಿನ್ ಪೀಟರ್‌ಸೆನ್ ಅವರು ಭಾರತದ ಬೆಳೆಯುತ್ತಿರುವ ಕ್ರೀಡಾ ಸಾಮರ್ಥ್ಯ, ಮಹಿಳಾ ಕ್ರಿಕೆಟ್‌ನ ಏಳಿಗೆ ಹಾಗೂ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶವು ಸಾಧಿಸಿರುವ ಪ್ರಗತಿಯ ಬಗ್ಗೆ ವಿವರಿಸಿದ್ದಾರೆ. ವನ್ಯಜೀವಿಗಳನ್ನು ರಕ್ಷಿಸುವ ಮತ್ತು ನೈಸರ್ಗಿಕ ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನಗಳ ಜೊತೆಗೆ, ಭಾರತದ ಬದಲಾಗುತ್ತಿರುವ ದೂರದೃಷ್ಟಿಗೆ  ಪ್ರಧಾನಮಂತ್ರಿಯವರ ನಾಯಕತ್ವವು ಹೇಗೆ ಕೊಡುಗೆ ನೀಡುತ್ತಿದೆ ಎಂಬುದನ್ನು ಅವರು ಲೇಖನದಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ಪೋಸ್ಟ್‌ ನಲ್ಲಿ ಹೀಗೆ  ಬರೆದಿದೆ:

“ಕ್ರೀಡೆ, ತಂತ್ರಜ್ಞಾನ ಮತ್ತು ವನ್ಯಜೀವಿ ಸಂರಕ್ಷಣೆಯ ಕ್ಷೇತ್ರಗಳಲ್ಲಿ ಭಾರತ ತನ್ನ ಛಾಪು ಮೂಡಿಸುತ್ತಿದೆ!

@KP24 ಅವರು ಭಾರತದ ಬೆಳೆಯುತ್ತಿರುವ ಕ್ರೀಡಾ ಸಾಮರ್ಥ್ಯ, ಮಹಿಳಾ ಕ್ರಿಕೆಟ್‌ನ ಏಳಿಗೆ ಹಾಗೂ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶವು ಸಾಧಿಸಿರುವ ಪ್ರಗತಿಯ ಬಗ್ಗೆ ವಿವರಿಸಿದ್ದಾರೆ. ವನ್ಯಜೀವಿಗಳನ್ನು ರಕ್ಷಿಸುವ ಮತ್ತು ನೈಸರ್ಗಿಕ ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನಗಳ ಜೊತೆಗೆ, ಭಾರತದ ಬದಲಾಗುತ್ತಿರುವ ದೂರದೃಷ್ಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ @narendramodi ಅವರ ನಾಯಕತ್ವವು ಹೇಗೆ ಕೊಡುಗೆ ನೀಡುತ್ತಿದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ.”

https://www.hindustantimes.com/opinion/an-aspiring-achieving-assertive-new-india-101792953158240.html

 

*****