ಪಿಎಂಇಂಡಿಯಾ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಭಾರತ ಮತ್ತು ಜಾಂಬಿಯಾ ನಡುವೆ ನ್ಯಾಯಾಂಗ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕಾಗಿರುವ ತಿಳುವಳಿಕಾ ಒಡಂಬಡಿಕೆಗೆ ಅಂಕಿತ ಹಾಕಿರುವುದನ್ನು ಅನುಮೋದಿಸಿತು.
ಭಾರತ ಮತ್ತು ಜಾಂಬಿಯಾ ನಡುವೆ ಇತ್ತೀಚಿನ ವರ್ಷಗಳಲ್ಲಿ , ಸಾಮಾಜಿಕ,ಸಾಂಸ್ಕೃತಿಕ ಮತ್ತು ವಾಣಿಜ್ಯಿಕ ಬಾಂಧವ್ಯಗಳು ಅಭಿವೃದ್ದಿ ಹೊಂದುತ್ತಿದ್ದು, ಧನಾತ್ಮಕ ಹಾದಿಯಲ್ಲಿ ಸಾಗುತ್ತಿವೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಹಕಾರಕ್ಕಾಗಿ ಸಹಿ ಹಾಕಲಾದ ಒಡಂಬಡಿಕೆ ಎರಡೂ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಇನ್ನಷ್ಟು ಉತ್ತಮಗೊಳಿಸಲಿದೆ ಮತು ನ್ಯಾಯಾಂಗ ಸುಧಾರಣೆಗಳಲ್ಲಿ ಹೊಸ ಆಯಾಮ ಒದಗಿಸಲಿದೆ.
***