ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಟುನೇಷಿಯಾ ನಡುವೆ ನ್ಯಾಯ ಕ್ಷೇತ್ರದ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ (ಎಂ.ಓ.ಯು)ಕ್ಕೆ ಸಮ್ಮತಿ ಸೂಚಿಸಿದೆ.
ಇತ್ತೀಚಿನ ವರ್ಷಗಳಲ್ಲಿ ಭಾರತ ಮತ್ತು ಟುನೇಷಿಯಾ ನಡುವೆ ಸಾಮಾಜಿಕ, ಸಾಂಸ್ಕೃತಿಕ ಮತ್ತು ವಾಣಿಜ್ಯ ಸಂಬಂಧಗಳು ಸಕಾರಾತ್ಮಕವಾದ ದಿಕ್ಕಿನಲ್ಲಿ ಅಭಿವೃದ್ಧಿ ಹೊಂದಿದೆ. ನ್ಯಾಯಿಕ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕುವುದರಿಂದ ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯ ಉತ್ತಮವಾಗಿ ಇನ್ನಷ್ಟು ವರ್ಧಿಸಲಿದೆ ಮತ್ತು ನ್ಯಾಯಾಂಗ ಸುಧಾರಣೆಯ ಕ್ಷೇತ್ರದಲ್ಲಿ ಹೊಸ ಆಯಾಮ ನೀಡಲಿದೆ.
AKT/VBA/SH