Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ಪ್ಯಾಲಸ್ತೀನ್ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


 

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಪ್ಯಾಲಸ್ತೀನ್ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದ ಸಹಕಾರಕ್ಕಾಗಿ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಪೂರ್ವಾನ್ವಯ ಅನುಮೋದನೆ ನೀಡಿದೆ. ಈ ತಿಳಿವಳಿಕೆ ಒಪ್ಪಂದಕ್ಕೆ 2017ರ ಮೇ 16ರಂದು ಅಂಕಿತ ಹಾಕಲಾಗಿತ್ತು.

ಈ ತಿಳಿವಳಿಕೆ ಒಪ್ಪಂದವು ಈ ಕೆಳಕಂಡ ಕ್ಷೇತ್ರಗಳ ಸಹಕಾರವನ್ನು ಒಳಗೊಂಡಿದೆ: –

i) ಆರೋಗ್ಯ ಸಿಬ್ಬಂದಿಯ ಸಾಮರ್ಥ್ಯ ವರ್ಧನೆ; 
ii) ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ತಡೆ;
iii) ಫಿಸಿಯೋಥೆರಪಿ ಮತ್ತು ಪುನರ್ವಸತಿ; 
iv) ಔಷಧ ಮತ್ತು ವೈದ್ಯಕೀಯ ಸಾಧನಗಳು; ಮತ್ತು
v) ಪರಸ್ಪರ ಹಿತಾಸಕ್ತಿಯ ಯಾವುದೇ ಇತರ ಕ್ಷೇತ್ರ.
ಈ ಸಹಕಾರದ ವಿವರವನ್ನು ವ್ಯಾಖ್ಯಾನಿಸಲು ಮತ್ತು ತಿಳಿವಳಿಕೆ ಒಪ್ಪಂದದ ಅನುಷ್ಠಾನದ ಬಗ್ಗೆ ನಿಗಾ ವಹಿಸಲು ಜಂಟಿ ಕಾರ್ಯಪಡೆಯನ್ನು ಸ್ಥಾಪಿಸಲಾಗುತ್ತದೆ.

***

AKT/VBA