Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ಬ್ರೆಜಿಲ್ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಹಕಾರ ಕುರಿತ ಒಪ್ಪಂದಕ್ಕೆ ಸಂಪುಟ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಬ್ರೆಜಿಲ್ ನಡುವೆ ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಹಕಾರ ಕುರಿತ ಒಪ್ಪಂದಕ್ಕೆ ಅನುಮೋದನೆ ನೀಡಿತು. ನವೆಂಬರ್ 2019ರಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ.

ಪ್ರಯೋಜನಗಳು :

ಈ ದ್ವಿಪಕ್ಷೀಯ ಒಪ್ಪಂದದಿಂದ ಭಾರತ ಮತ್ತು ಬ್ರೆಜಿಲ್ ನಡುವೆ ಆರೋಗ್ಯ ವಲಯದಲ್ಲಿ ಸಂಶೋಧನಾ ಅಭಿವೃದ್ಧಿ ಮತ್ತು ಆರೋಗ್ಯ ವಲಯದಲ್ಲಿ ತಾಂತ್ರಿಕ ಅಭಿವೃದ್ಧಿ ಮತ್ತಿತರ ಜಂಟಿ ಉಪಕ್ರಮಗಳ ಮೂಲಕ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧಕ್ಕೆ ಉತ್ತೇಜನ ದೊರೆಯಲಿದೆ. ಇದರಿಂದ ಎರಡೂ ದೇಶಗಳ ಜನರ ಸಾರ್ವಜನಿಕ ಆರೋಗ್ಯ ಸ್ಥಿತಿಗತಿ ಸುಧಾರಣೆಯಾಗಲು ಸಹಕಾರಿಯಾಗುತ್ತದೆ ಹಾಗೂ ಇದರಿಂದ ಭಾರತ ಮತ್ತು ಬ್ರೆಜಿಲ್ ನಡುವಿನ ದ್ವಿಪಕ್ಷೀಯ ಸಂಬಂಧ ಬಲವರ್ಧನೆಯಾಗಲಿದೆ.