Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ರಷ್ಯಾ ನಡುವೆ ಯುವ ವ್ಯವಹಾರಗಳ ಸಹಕಾರಕ್ಕೆ ಸಂಬಂಧಿಸಿದಂತೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನ


ಭಾರತ ಮತ್ತು ರಷ್ಯಾ ನಡುವೆ ಯುವ ವ್ಯವಹಾರಗಳ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ವಿನಿಮಯವು ಎರಡೂ ರಾಷ್ಟ್ರಗಳ ನಡುವೆ ಸ್ನೇಹ ಸಂಬಂಧವನ್ನು ಒಗ್ಗೂಡಿಸಲು ಮತ್ತು ಜನರೊಂದಿಗಿನ ಸಂಪರ್ಕ ಸ್ಥಾಪಿಸುವ ಮೂಲಕ ಕಲ್ಪನೆಗಳು, ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಯುವ ಜನರೊಂದಿಗೆ ಹಂಚಿಕೊಳ್ಳಲು ಉತ್ತೇಜನ ನೀಡುತ್ತದೆ.

ಈ ವಿನಿಮಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಯ್ಕೆಯನ್ನು ಉದ್ದೇಶ ಮತ್ತು ಪಾರದರ್ಶಕವಾಗಿ ನಡೆಸಲಾಗುತ್ತದೆ ಮತ್ತು ಈ ತಿಳಿವಳಿಕೆ ಒಪ್ಪಂದದ ಅಡಿಯಲ್ಲಿನ ಕಾರ್ಯಕ್ರಮಗಳ ಫಲಿತಾಂಶವು ಸಾರ್ವಜನಿಕರ ಪರಿಶೀಲನೆಗೆ ಮುಕ್ತವಾಗಿರುತ್ತದೆ.

ಯುವಕರಲ್ಲಿ ಅಂತಾರಾಷ್ಟ್ರೀಯ ದೃಷ್ಟಿಕೋನವನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ ಮತ್ತು ಅವರ ಜ್ಞಾನವನ್ನು ವಿಸ್ತರಿಸುತ್ತದೆ. ಮತ್ತು ಯುವ ವ್ಯವಹಾರ ಕ್ಷೇತ್ರದಲ್ಲಿ ತಜ್ಞತೆ ತರುತ್ತದೆ.

*****

AKT/VBA/SH