Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರು ತಮ್ಮ ಜೀವನದುದ್ದಕ್ಕೂ ತಾಯ್ನಾಡಿನ ಸೇವೆಗೆ ಸಮರ್ಪಿತರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಗುಲಾಮಗಿರಿಯ ಸರಪಳಿಗಳನ್ನು ಮುರಿಯಲು ಸಾಮಾಜಿಕ ಸುಧಾರಣೆಯ ಜೊತೆಗೆ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅವರ ಅಪ್ರತಿಮ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಶ್ರೀ ಮೋದಿ ಹೇಳಿದರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:

“मातृभूमि की सेवा में आजीवन समर्पित रहे भारत रत्न महामना पंडित मदन मोहन मालवीय जी को उनकी जयंती पर आदरपूर्ण श्रद्धांजलि। उन्होंने गुलामी की जंजीरों को तोड़ने के लिए समाज सुधार के साथ राष्ट्रीय चेतना को जागृत करने में महत्वपूर्ण भूमिका निभाई। देश के शिक्षा जगत में उनका अतुलनीय योगदान कभी भुलाया नहीं जा सकता।”

*****