Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭೌದ್ಧಿಕ ಆಸ್ತಿ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ (ಯುಕೆ) ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟ ಸಮ್ಮತಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೌದ್ಧಿಕ ಆಸ್ತಿ (ಐ.ಪಿ.) ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ (ಯುಕೆ) ನಡುವೆ ತಿಳಿವಳಿಕೆ ಒಪ್ಪಂದಕ್ಕೆ ತನ್ನ ಪೂರ್ವಾನ್ವಯ ಸಮ್ಮತಿ ಸೂಚಿಸಿದೆ. ಈ ತಿಳಿವಳಿಕೆ ಒಪ್ಪಂದಕ್ಕೆ 7.11.2016ರಂದು ಸಹಿ ಹಾಕಲಾಗಿತ್ತು.

ಈ ತಿಳಿವಳಿಕೆ ಒಪ್ಪಂದವು ಐಪಿಯಲ್ಲಿ ಆಯೋಮೇಷನ್, ಮಾಹಿತಿ ಮತ್ತು ಹೊಸ ದಸ್ತಾವೇಜು ವ್ಯವಸ್ಥೆಗೆ ವಿಸ್ತೃತ ಶ್ರೇಣಿಯ ಮತ್ತು ಹೊಂದಿಕೊಳ್ಳುವಂಥ ವ್ಯವಸ್ಥೆಯ ಸ್ಥಾಪನೆಯನ್ನು ಬಯಸುತ್ತದೆ. ಇದು ತರಬೇತಿ ಕಾರ್ಯಕ್ರಮಗಳಲ್ಲಿ ಸಹಯೋಗ, ತಜ್ಞರ ವಿನಿಮಯ ಮತ್ತು ತಾಂತ್ರಿಕ ವಿನಿಮಯ ಹಾಗೂ ವ್ಯಾಪಕ ಚಟುವಟಿಕೆಗಳಿಗೆ ಅವಕಾಶ ಒದಗಿಸುತ್ತದೆ.

ಈ ತಿಳಿವಳಿಕೆ ಒಪ್ಪಂದದ ಜಾರಿಯಿಂದ ನಾವಿನ್ಯತೆ ಧನಾತ್ಮಕತೆಯ ಮೇಲೆ ಪರಿಣಾಮ ಬೀರುವ ಪೇಟೆಂಟ್ ಅರ್ಜಿಗಳ ಪರಿಶೀಲನೆಗೆ ಪೇಟೆಂಟ್, ವಿನ್ಯಾಸ ಮತ್ತು ಟ್ರೇಡ್ ಮಾರ್ಕ್ ಮಹಾ ನಿರ್ದೇಶಕರ ಕಚೇರಿಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

*****

akt/vba/sh