Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.

ಇದೇ ವೇಳೆ, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ;

“ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****