Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಯಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ 


ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಂಭವಿಸಿದ ಅವಘಡದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ಅವರು ತಮ್ಮ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ಮುಂದಿನ ವಾರಸುದಾರರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದೆ;

“ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಸಂಭವಿಸಿದ ಅವಘಡದಿಂದ ಜೀವಹಾನಿಯಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಅವಘಡದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬದ ಮುಂದಿನ ವಾರಸುದಾರರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

@narendramodi

******