ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದರು.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ:
“ಮಧ್ಯಪ್ರದೇಶದ ಜಬಲ್ ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಜೀವಹಾನಿ ಅತ್ಯಂತ ನೋವಿನಿಂದ ಕೂಡಿದೆ. ಈ ದುರಂತ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.
ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ”
*****
The loss of lives due to the capsizing of a boat in Jabalpur, Madhya Pradesh, is extremely painful. I extend my condolences to those who have lost their loved ones in this tragic mishap. Praying for the speedy recovery of the injured. The local administration is assisting those…
— PMO India (@PMOIndia) May 1, 2026