ಪಿಎಂಇಂಡಿಯಾ
ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:
“ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi”
*****
The loss of lives due to a mishap in Rewa, Madhya Pradesh is saddening. My thoughts are with those who have lost their loved ones. Praying for the swift recovery of the injured: PM @narendramodi
— PMO India (@PMOIndia) September 2, 2026