Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮನಿಲಾದಲ್ಲಿ ಆಸಿಯಾನ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರಿಂದ ಸಿಂಗಾಪುರ ಪ್ರಧಾನಮಂತ್ರಿ ಅವರ ಭೇಟಿ

ಮನಿಲಾದಲ್ಲಿ ಆಸಿಯಾನ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಅವರಿಂದ ಸಿಂಗಾಪುರ ಪ್ರಧಾನಮಂತ್ರಿ ಅವರ ಭೇಟಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನಿಲಾದಲ್ಲಿಂದು 23ನೇ ಭಾರತ-ಆಸಿಯಾನ್ ಶೃಂಗಸಭೆ ಮತ್ತು 21ನೇ ಪೂರ್ವ ಏಷ್ಯಾ ಶೃಂಗಸಭೆಯ ನೇಪಥ್ಯದಲ್ಲಿ ಸಿಂಗಾಪುರ ಪ್ರಧಾನಿ ಶ್ರೀ ಲಾರೆನ್ಸ್ ವಾಂಗ್ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರು, ಸೆಪ್ಟೆಂಬರ್ 2025ರಲ್ಲಿ ಪ್ರಧಾನಿ ವಾಂಗ್ ಅವರ ಅಧಿಕೃತ ಭಾರತ ಭೇಟಿಯ ಸಂದರ್ಭದಲ್ಲಿ ಅಂಗೀಕರಿಸಲಾದ ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗಾಗಿನ ಮಾರ್ಗಸೂಚಿ’ಯಡಿಯಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು. ಅಲ್ಲದೆ, ಆರ್ಥಿಕ ಸಹಕಾರ, ಕೌಶಲ್ಯಾಭಿವೃದ್ಧಿ, ಡಿಜಿಟಲೀಕರಣ, ಸುಸ್ಥಿರತೆ, ಸಂಪರ್ಕ ವ್ಯವಸ್ಥೆ, ಆರೋಗ್ಯ ರಕ್ಷಣೆ ಹಾಗೂ ವೈದ್ಯಕೀಯ, ರಕ್ಷಣೆ ಮತ್ತು ಭದ್ರತಾ ಸಹಕಾರ ಹಾಗೂ ಜನರ ನಡುವಿನ ಬಾಂಧವ್ಯ ಮತ್ತು ಸಾಂಸ್ಕೃತಿಕ ವಿನಿಮಯಗಳು ಸೇರಿದಂತೆ ಎಂಟು ಆದ್ಯತಾ ಕ್ಷೇತ್ರಗಳಲ್ಲಿ ಮುಂದಿನ ಕ್ರಮಗಳ ಕುರಿತು ಚರ್ಚಿಸಿದರು. ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಕುರಿತು ಇಬ್ಬರೂ ನಾಯಕರು ಅಭಿಪ್ರಾಯ ಹಂಚಿಕೊಂಡರು.

ಮುಂಬರುವ ಆಸಿಯಾನ್ ಶೃಂಗಸಭೆಯ ಅಧ್ಯಕ್ಷತೆಯನ್ನು ಸಿಂಗಾಪುರ ವಹಿಸಿಕೊಳ್ಳಲಿರುವ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ಶುಭಾಶಯ ಕೋರಿದ್ದಾರೆ. ಅದರ ಯಶಸ್ಸಿಗೆ ಭಾರತದ ಸಂಪೂರ್ಣ ಬೆಂಬಲವಿರಲಿದೆ ಎಂದು ಅವರು ಪ್ರಧಾನಿ ವಾಂಗ್ ಅವರಿಗೆ ಭರವಸೆ ನೀಡಿದ್ದಾರೆ.

 

*****