Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಣ ಪ್ರತಾಪ್ ಅವರ ಜಯಂತಿಯ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಮಹಾರಾಣ ಪ್ರತಾಪ್ ಅವರು ಶೌರ್ಯ ಮತ್ತು ಪರಾಕ್ರಮದ ಅಮರ ಪ್ರತೀಕವಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ತಾಯ್ನಾಡಿನ ಗೌರವ, ಘನತೆ ಮತ್ತು ಸ್ವಾಭಿಮಾನವನ್ನು ಕಾಪಾಡಲು ಅವರು ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ್ದರು ಎಂದು ಪ್ರಧಾನ ಮಂತ್ರಿಗಳು ಉಲ್ಲೇಖಿಸಿದ್ದಾರೆ. 

ಮಹಾರಾಣ ಪ್ರತಾಪ್ ಅವರ ಅಜೇಯ ಧೈರ್ಯ ಮತ್ತು ಅಚಲ ಆತ್ಮಗೌರವದ ಗಾಥೆ ಮುಂದಿನ ಪೀಳಿಗೆಗೆ ದೇಶಭಕ್ತಿಯ ಸ್ಫೂರ್ತಿಯನ್ನು ದೇಶದ ಜನರ ಹೃದಯಗಳಲ್ಲಿ ಜೀವಂತವಾಗಿರಿಸುತ್ತದೆ ಎಂದು ಕೂಡ ಪ್ರಧಾನಮಂತ್ರಿ ಹೇಳಿದ್ದಾರೆ.

ಈ ಕುರಿತು ಪ್ರಧಾನಮಂತ್ರಿಗಳು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ; 

“वीरता और पराक्रम के अमर प्रतीक, देश के महान योद्धा महाराणा प्रताप को उनकी जयंती पर आदरपूर्ण श्रद्धांजलि। उन्होंने मातृभूमि की आन-बान और शान की रक्षा के लिए अपना जीवन समर्पित कर दिया। उनके अदम्य साहस और अटूट स्वाभिमान की गाथाएं युगों-युगों तक देशवासियों के हृदय में राष्ट्रभक्ति का दीप प्रज्वलित करती रहेंगी।”

 

*****