Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ 


ಮಹಾರಾಷ್ಟ್ರದ ನಾಗ್ಪುರದ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಪ್ರಧಾನಮಂತ್ರಿಯವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿಯವರು, “ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಪ್ರಾರ್ಥಿಸಿದ್ದಾರೆ. “ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ” ಎಂದು ಪ್ರಧಾನಮಂತ್ರಿಯವರು ದೃಢಪಡಿಸಿದ್ದಾರೆ.

ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ “ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)”ಯಿಂದ ರೂಪಾಯಿ 2 ಲಕ್ಷಗಳ ಪರಿಹಾರವನ್ನು ಹಾಗೂ ಗಾಯಾಳುಗಳಿಗೆ ರೂಪಾಯಿ 50,000 ಅನ್ನು ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಘೋಷಿಸಿದ್ದಾರೆ. 

‘ಎಕ್ಸ್’ ತಾಣದ ತಮ್ಮ ಖಾತೆಯಲ್ಲಿ ಪ್ರಧಾನಮಂತ್ರಿಯವರು ಈ ರೀತಿ ಸಂದೇಶವನ್ನು ಹಂಚಿಕೊಂಡಿದ್ದಾರೆ;

“ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ತೀವ್ರ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಪ್ರತಿ ಮೃತರ ಸನಿಹದ ಸಂಬಂಧಿಕರಿಗೆ “ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)”ಯಿಂದ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು”

 

*****