Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ದುಃಖದ ಸಮಯದಲ್ಲಿ ಶ್ರೀ ನರೇಂದ್ರ ಮೋದಿ ಅವರು ದುಃಖತಪ್ತ ಕುಟುಂಬಗಳಿಗೆ ತಮ್ಮ ಆಲೋಚನೆಗಳನ್ನು ತಿಳಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು. ಹಾಗೆಯೇ ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ;

“ಮಹಾರಾಷ್ಟ್ರದ ಸೋಲಾಪುರ ಗ್ರಾಮಾಂತರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****