ಪಿಎಂಇಂಡಿಯಾ
ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ 60 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಪ್ರಿಯಾ ಘಂಗಾಸ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಗೆಲುವು ಪ್ರಿಯಾ ಘಂಗಾಸ್ ಅವರ ಅಸಾಧಾರಣ ಕೌಶಲ್ಯ ಮತ್ತು ಮಾನಸಿಕ ದೃಢತೆಯ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಿಯಾ ಘಂಗಾಸ್ ಅವರ ಮುಂದಿನ ಎಲ್ಲ ಪ್ರಯತ್ನಗಳಿಗೂ ಶುಭವಾಗಲಿ ಎಂದು ಶ್ರೀ ಮೋದಿ ಹಾರೈಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದುಕೊಂಡಿದ್ದಾರೆ;
“ಮಹಿಳೆಯರ 60 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರಿಯಾ ಘಂಗಾಸ್ ಭಾರತಕ್ಕೆ ಭವ್ಯ ಚಿನ್ನದ ಪದಕ ತಂದುಕೊಟ್ಟಿದ್ದಾರೆ! ಇದು ಅವರ ಅಸಾಧಾರಣ ಕೌಶಲ್ಯ ಮತ್ತು ಮಾನಸಿಕ ದೃಢತೆಯ ಪ್ರತಿಬಿಂಬವಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ನನ್ನ ಶುಭಾಶಯಗಳು.
#CWG2026”
*****
Priya Ghangas brings home a glorious Gold in the Women’s 60 kg Boxing event! It reflects her remarkable skill and mental strength. Congratulations to her. My best wishes for her upcoming endeavours. #CWG2026
— Narendra Modi (@narendramodi) August 1, 2026