Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 63 ಕೆ.ಜಿ ಜೂಡೋದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 63 ಕೆ.ಜಿ ಜೂಡೋ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಉನ್ನತಿ ಶರ್ಮಾ ಅವರ ಬದ್ಧತೆ ಮತ್ತು ದೃಢನಿಶ್ಚಯವು ಸ್ಪರ್ಧೆಯುದ್ದಕ್ಕೂ ಸ್ಪಷ್ಟವಾಗಿ ಗೋಚರಿಸಿತು ಎಂದು ಪ್ರಧಾನಮಂತ್ರಿ ಹೇಳಿದರು.

ಅವರ ಎಲ್ಲಾ ಭವಿಷ್ಯದ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಜೂಡೋದಲ್ಲಿ ಭಾರತಕ್ಕೆ ಮತ್ತಷ್ಟು ವೈಭವ! 2026 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 63 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಉನ್ನತಿ ಶರ್ಮಾ ಅವರಿಗೆ ಅಭಿನಂದನೆಗಳು. ಕ್ರೀಡಾಕೂಟದ ಸಮಯದಲ್ಲಿ ಅವರ ಬದ್ಧತೆ ಮತ್ತು ದೃಢನಿಶ್ಚಯವು ಸ್ಪಷ್ಟವಾಗಿ ಗೋಚರಿಸಿತು. ಅವರು ತಮ್ಮ ಮುಂಬರುವ ಎಲ್ಲಾ ಪ್ರಯತ್ನಗಳಲ್ಲಿ ಉತ್ತಮ ಸಾಧನೆ ಮಾಡಲಿ.

#CWG2026″

 

*****