Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 75 ಕೆಜಿ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಗೆದ್ದ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದ ಮಹಿಳೆಯರ 75 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಲವ್ಲಿನಾ ಬೊರ್ಗೊಹೈನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಸ್ಪರ್ಧೆಯುದ್ದಕ್ಕೂ ಲವ್ಲಿನಾ ಬೊರ್ಗೊಹೈನ್ ಅತ್ಯುತ್ತಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ.

ಈ ಸಾಧನೆಗಾಗಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಶ್ರೀ ಮೋದಿ, ಅವರ ಸಮರ್ಪಣೆ ಮತ್ತು ನಿರಂತರತೆ ದೇಶದಾದ್ಯಂತದ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದಿದ್ದಾರೆ;

“ಮಹಿಳೆಯರ 75 ಕೆ.ಜಿ. ಬಾಕ್ಸಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಲವ್ಲಿನಾ ಬೊರ್ಗೊಹೈನ್ ಬಗ್ಗೆ ಹೆಮ್ಮೆ ಇದೆ! ಅವರು ಸ್ಪರ್ಧೆಯುದ್ದಕ್ಕೂ ಅತ್ಯುತ್ತಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಸಮರ್ಪಣೆ ಮತ್ತು ನಿರಂತರತೆ ದೇಶದಾದ್ಯಂತದ ಕ್ರೀಡಾಪಟುಗಳಿಗೆ ನಿರಂತರ ಸ್ಫೂರ್ತಿಯಾಗಿದೆ.

#CWG2026”

 

*****