ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಡಾ. ಸಿಂಗ್ ಅವರು ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲ ಕಳೆದಿದ್ದಾರೆ ಮತ್ತು ದೇಶಕ್ಕೆ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಿದ್ದಾರೆ ಎಂದು ಪ್ರಧಾನ ಮಂತ್ರಿಗಳು ತಿಳಿಸಿದರು.
ಪ್ರಧಾನಮಂತ್ರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“ನಮ್ಮ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಅವರ ಜನ್ಮದಿನದಂದು ನಮನಗಳು. ಅವರು ಸಾರ್ವಜನಿಕ ಜೀವನದಲ್ಲಿ ದೀರ್ಘಕಾಲ ಕಳೆದಿದ್ದಾರೆ ಮತ್ತು ದೇಶಕ್ಕೆ ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸಿದ್ದಾರೆ.”
*****
Tributes to our former Prime Minister Dr. Manmohan Singh Ji on his birth anniversary. He spent many years in public life and served the nation with dedication.
— Narendra Modi (@narendramodi) September 26, 2026