Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಜಿ ರಾಷ್ಟ್ರಪತಿಯವರಾದ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ ಬಿಡುಗಡೆ ಸಂದರ್ಭದಲ್ಲಿ ತಮ್ಮ ಭಾಷಣದ ಕೆಲವು ತುಣುಕುಗಳನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಮಾಜಿ ರಾಷ್ಟ್ರಪತಿಯವರಾದ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯಾದ ‘ಟ್ರಯಂಫ್ ಆಫ್ ದಿ ಇಂಡಿಯನ್ ರಿಪಬ್ಲಿಕ್: ಮೈ ಲೈಫ್, ಮೈ ಸ್ಟ್ರಗಲ್ಸ್’ ನ ಬಿಡುಗಡೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮ್ಮ ಭಾಷಣದ ಕೆಲವು ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಈ ಪುಸ್ತಕದ ಮೂಲ ವಿಷಯವನ್ನು ಒತ್ತಿ ಹೇಳಿದ ಅವರು, ಶ್ರೀ ಕೋವಿಂದ್ ಅವರ ಸ್ಪೂರ್ತಿದಾಯಕ ಹೋರಾಟಗಳು, ವಿವಿಧ ಪಾತ್ರ / ಪದವಿಗಳಲ್ಲಿ ಅವರು ನೀಡಿದ ಶ್ರೀಮಂತ ಕೊಡುಗೆಗಳು ಮತ್ತು ಸಾರ್ವಜನಿಕ ಸೇವೆಗೆ ಅವರ ಆಳವಾದ ಬದ್ಧತೆಯನ್ನು ಇದು ಅದ್ಭುತವಾಗಿ ಉಲ್ಲೇಖಿಸುತ್ತದೆ, ಇದು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿ ನಿಂತು ರಾಷ್ಟ್ರದ ಪ್ರಜಾಪ್ರಭುತ್ವದ ನಿಜವಾದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

Xನ ಸರಣಿ ಪೋಸ್ಟ್‌ಗಳಲ್ಲಿ ಪ್ರಧಾನಮಂತ್ರಿಯವರು:

“ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯಾದ ‘ಟ್ರಯಂಫ್ ಆಫ್ ದಿ ಇಂಡಿಯನ್ ರಿಪಬ್ಲಿಕ್: ಮೈ ಲೈಫ್, ಮೈ ಸ್ಟ್ರಗಲ್ಸ್’ ಬಿಡುಗಡೆಯಲ್ಲಿ ಭಾಗವಹಿಸಿದ್ದು ನನಗೆ ಸಂತೋಷತಂದಿದೆ. ಈ ಪುಸ್ತಕವು ಭಾರತೀಯ ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ಮತ್ತು ಸಾಧ್ಯತೆಗಳನ್ನು ಪ್ರತಿಬಿಂಬಿಸುತ್ತದೆ.”

“ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಪುಸ್ತಕವು ಸ್ಪೂರ್ತಿದಾಯಕವಾಗಿದ್ದು, ಸಂಸದರಾಗಿ, ರಾಜ್ಯಪಾಲರಾಗಿ ಮತ್ತು ಭಾರತದ ರಾಷ್ಟ್ರಪತಿಯಾಗಿ ಅವರ ಹೋರಾಟಗಳು, ಸೇವೆ ಮತ್ತು ಶ್ರೀಮಂತ ಕೊಡುಗೆಯನ್ನು ಈ ಪುಸ್ತಕವು ಅದ್ಭುತವಾಗಿ ಉಲ್ಲೇಖಿಸುತ್ತದೆ.”

<

“ಶ್ರೀ ರಾಮ್ ನಾಥ್ ಕೋವಿಂದ್ ಅವರು ಸಾರ್ವಜನಿಕ ಸೇವೆಯನ್ನು ತಮ್ಮ ಜೀವನದ ಮಾರ್ಗವಾಗಿ ಆರಿಸಿಕೊಂಡು, ಸದಾಕಾಲ ತಮ್ಮ ಕರ್ತವ್ಯಗಳಿಗೆ ಅವರು ಆಳವಾಗಿ ಬದ್ಧರಾಗಿದ್ದರು. ಅವರ ಸಮರ್ಪಣೆ ಮತ್ತು ಸೇವಾ ಮನೋಭಾವವು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದೆ.”

 

*****