Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾತಾ ವೈಷ್ಣೋದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತಾ ವೈಷ್ಣೋ ದೇವಿ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಮಾತಾ ವೈಷ್ಣೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಉಂಟಾದ ಜೀವಹಾನಿ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವೆ. ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್‌ ಜನರಲ್‌ ಶ್ರೀ ಮನೋಜ್‌ ಸಿನ್ಹಾ @manojsinha, ಸಚಿವರಾದ ಶ್ರೀ ಡಾ. ಜಿತೇಂದ್ರ ಸಿಂಗ್‌@DrJitendraSingh, ನಿತ್ಯಾನಂದ ರಾಯ್‌ @nityanandraibjp ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ,” ಎಂದು ತಿಳಿಸಿದ್ದಾರೆ

***