Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮುಂಬೈ ಮತ್ತು ಸುತ್ತಲ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ಪ್ರಧಾನಿ; ಕೇಂದ್ರದಿಂದ ಎಲ್ಲ ಅಗತ್ಯ ನೆರವಿನ ಭರವಸೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಂಬೈ ಮತ್ತು ಸುತ್ತಲ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತುಕತೆ ನಡೆಸಿದರು.

ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿ ಎದುರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಪ್ರಧಾನಿ ನೀಡಿದರು.

“ಮುಂಬೈ ಮತ್ತು ಸುತ್ತಲ ಪ್ರದೇಶಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿ ಎದುರಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ಸಾಧ್ಯ ನೆರವಿನ ಭರವಸೆ ನೀಡಲಾಗಿದೆ. ಮುಂಬೈ ಮತ್ತು ಸುತ್ತಮುತ್ತಲ ಪ್ರದೇಶದ ನಿವಾಸಿಗಳು ಭಾರೀ ಮಳೆಯ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕೈಗೊಂಡು, ಸುರಕ್ಷಿತವಾಗಿರುವಂತೆ ಮನವಿ ಮಾಡುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

*****