Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

‘ಮೇಕ್ ಇನ್ ಇಂಡಿಯಾ’ 12 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಅದರ ಪ್ರಭಾವವನ್ನು ಎತ್ತಿಹಿಡಿದ ಪ್ರಧಾನಮಂತ್ರಿ


‘ಮೇಕ್ ಇನ್ ಇಂಡಿಯಾ’ ಉಪಕ್ರಮವು 12 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ, ಇದರ ಸಾಧನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎತ್ತಿ ಪ್ರಸ್ತಾಪಿಸಿದರು.

‘ಮೇಕ್ ಇನ್ ಇಂಡಿಯಾ’ ಉಪಕ್ರಮದಿಂದ ಭಾರತದಲ್ಲಿ ಉತ್ಪಾದನೆ ಹೆಚ್ಚಾಗಿದೆ, ದೇಶದಲ್ಲಿ ಹೂಡಿಕೆ ಹೆಚ್ಚಾಗಿದೆ ಮತ್ತು ಭಾರತದಿಂದ ರಫ್ತು ಕೂಡ ಹೆಚ್ಚಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಈ ಬದಲಾವಣೆ ಎಲ್ಲಾ ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿಯವರು ‘ಎಕ್ಸ್’ ನಲ್ಲಿ ಹೀಗೆ ಹೇಳಿದ್ದಾರೆ:

“ಭಾರತದಲ್ಲಿ ಹೆಚ್ಚು ಉತ್ಪಾದನೆ.

ಭಾರತದಲ್ಲಿ ಹೆಚ್ಚು ಹೂಡಿಕೆ.

ಭಾರತದಿಂದ ಹೆಚ್ಚು ರಫ್ತು.

ಎಲ್ಲಾ ಕ್ಷೇತ್ರಗಳಲ್ಲಿ ಕಾಣಿಸುತ್ತಿರುವ ಪರಿವರ್ತನೆ!

#12YearsOfMakeInIndia”

 

*****