Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯು.ಎಸ್.ಎ.ಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೋನಾಲ್ಡ್ ಟ್ರಂಪ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಅಮೆರಿಕ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಡೋನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

“ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡೋನಾಲ್ಡ್ ಟ್ರಂಪ್ ಅವರಿಗೆ ಅಭಿನಂದನೆಗಳು.

ಮುಂಬರುವ ವರ್ಷಗಳಲ್ಲಿ ಯು.ಎಸ್.ಎ. ಅನ್ನು ಶ್ರೇಷ್ಠ ಸಾಧನೆಯತ್ತ ಮುನ್ನಡೆಸಲಿರುವ ಅವರಿಗೆ ಶುಭ ಹಾರೈಕೆಗಳು.ಭಾರತ – ಯು.ಎಸ್.ಎ. ಕಾರ್ಯತಂತ್ರಾತ್ಮಕ ಪಾಲುದಾರಿಕೆಯ ಬಲ, ನಮ್ಮ ಹಂಚಿಕೆಯ ಮೌಲ್ಯಗಳು ಮತ್ತು ಸಮಾನ ಆಸಕ್ತಿಯಲ್ಲಿ ಅಡಗಿದೆ.

ಭಾರತ- ಅಮೆರಿಕ ಬಾಂಧವ್ಯವನ್ನು ಮತ್ತಷ್ಟು ಆಳಗೊಳಿಸಲು ಅಧ್ಯಕ್ಷರೊಂದಿಗೆ ಜೊತೆಗೂಡಿ ಕಾರ್ಯ ನಿರ್ವಹಿಸಲು ಮತ್ತು ನಮ್ಮ ಸಹಕಾರದ ಪೂರ್ಣ ಸಾಮರ್ಥ್ಯವನ್ನು ಸಾಕಾರಗೊಳಿಸಲು ಎದಿರು ನೋಡುತ್ತಿದ್ದೇನೆ “, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/HS