Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿರುವ ವರದಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಸಾಧಿಸಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ಅತ್ಯಂತ ಕಾರ್ಯಸಾಧ್ಯವಾದ ಮಾರ್ಗವಾಗಿ ಉಳಿದಿವೆ ಎಂದು ಶ್ರೀ ನರೇಂದ್ರ ಮೋದಿ ಒತ್ತಿ ಹೇಳಿದರು. ಸಂಬಂಧಪಟ್ಟ ಎಲ್ಲ ಪಕ್ಷಗಳು ಈ ಪ್ರಯತ್ನಗಳತ್ತ ಗಮನ ಹರಿಸಬೇಕು ಮತ್ತು ಅವುಗಳನ್ನು ದುರ್ಬಲಗೊಳಿಸುವ ಯಾವುದೇ ಕ್ರಮಗಳನ್ನು ತಪ್ಪಿಸಬೇಕು ಎಂದು ಅವರು ಆಗ್ರಹಿಸಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಬರೆದಿದ್ದಾರೆ:

“ರಷ್ಯಾದ ಒಕ್ಕೂಟದ ಅಧ್ಯಕ್ಷರ ನಿವಾಸವನ್ನು ಗುರಿಯಾಗಿಸಿಕೊಂಡ ವರದಿಗಳಿಂದ ತೀವ್ರ ಕಳವಳವಾಗಿದೆ. ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ಯುದ್ಧವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಸಾಧಿಸಲು ಅತ್ಯಂತ ಕಾರ್ಯಸಾಧ್ಯವಾದ ಮಾರ್ಗವನ್ನು ನೀಡುತ್ತವೆ. ಈ ಪ್ರಯತ್ನಗಳ ಬಗ್ಗೆ ಗಮನಹರಿಸಲು ಮತ್ತು ಅವುಗಳನ್ನು ದುರ್ಬಲಗೊಳಿಸುವ ಯಾವುದೇ ಕ್ರಮಗಳನ್ನು ತಪ್ಪಿಸಲು ಸಂಬಂಧಪಟ್ಟ ಎಲ್ಲರಿಗೂ ನಾವು ಮನವಿ ಮಾಡುತ್ತೇವೆ.

@KremlinRussia_E” 

 

*****