Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಸ್ಥಾನದ ಝುಂಝುನುದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಜಸ್ಥಾನದ ಝುಂಝುನುದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಆಗಿರುವ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು, ಮೃತಪಟ್ಟವರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯ ಅವರು ತಮ್ಮ ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

ರಾಜಸ್ಥಾನದ ಝುಂಝುನುದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜನರು ಪ್ರಾಣ ಕಳೆದುಕೊಂಡಿರುವುದು ದುಃಖ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ.

ಮೃತರ ಪ್ರತಿ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi

 

*****