Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಸಮಾರಂಭ-IIರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಸಮಾರಂಭ-IIರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಸಮಾರಂಭ-II ರಲ್ಲಿ ಭಾಗವಹಿಸಿದ್ದರು, ಅಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ವಿವಿಧ ಕ್ಷೇತ್ರಗಳಲ್ಲಿನ ಅಸಾಧಾರಣ ಸೇವೆ ಮತ್ತು ಸಮರ್ಪಣಾ ಭಾವವನ್ನು ಈ ಪ್ರಶಸ್ತಿಗಳು ಆಚರಿಸುತ್ತವೆ ಎಂದು ಪ್ರಧಾನಮಂತ್ರಿ ಹೇಳಿದರು.

ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರು ಸಮಾಜದ ಬಗೆಗಿನ ದೇಶದ ಬದ್ಧತೆಯ ಅತ್ಯುತ್ತಮ ಪ್ರತೀಕವಾಗಿದ್ದಾರೆ ಎಂದು ಶ್ರೀ ಮೋದಿ ಉಲ್ಲೇಖಿಸಿದರು.

ಪ್ರಶಸ್ತಿ ಪುರಸ್ಕೃತರ ಜೀವನ ಪಯಣವು ಅಸಂಖ್ಯಾತ ನಾಗರಿಕರಿಗೆ ಪ್ರೇರಣೆ ನೀಡುತ್ತದೆ ಮತ್ತು ಕಠಿಣ ಪರಿಶ್ರಮ ಹಾಗೂ ಸೇವೆಯ ಶಕ್ತಿಯನ್ನು ಎಲ್ಲರಿಗೂ ನೆನಪಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

X ನಲ್ಲಿನ ಪೋಸ್ಟ್‌ನಲ್ಲಿ ಶ್ರೀ ಮೋದಿ ಹೀಗೆ ಹೇಳಿದ್ದಾರೆ;

“ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರಶಸ್ತಿ ಸಮಾರಂಭ-IIರಲ್ಲಿ ಭಾಗವಹಿಸಿದ್ದೆ, ಅಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಅವು ವಿವಿಧ ಕ್ಷೇತ್ರಗಳಲ್ಲಿನ ಅಸಾಧಾರಣ ಸೇವೆ ಮತ್ತು ಸಮರ್ಪಣಾ ಭಾವವನ್ನು ಆಚರಿಸುತ್ತವೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರು ಸಮಾಜದ ಬಗೆಗಿನ ನಮ್ಮ ಬದ್ಧತೆಯ ಅತ್ಯುತ್ತಮ ಪ್ರತೀಕವಾಗಿದ್ದಾರೆ. ಅವರ ಜೀವನ ಪಯಣವು ಅಸಂಖ್ಯಾತ ನಾಗರಿಕರಿಗೆ ಪ್ರೇರಣೆ ನೀಡುತ್ತದೆ ಮತ್ತು ಕಠಿಣ ಪರಿಶ್ರಮ ಹಾಗೂ ಸೇವೆಯ ಶಕ್ತಿಯನ್ನು ಎಲ್ಲರಿಗೂ ನೆನಪಿಸುತ್ತದೆ.

@PadmaAwards”

 

*****