Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಆತ್ಮವಿಶ್ವಾಸದ ಅಭಿವ್ಯಕ್ತಿಯಾಗಿ ಸೋಮನಾಥ ದೇವಾಲಯದ ಪುನರ್ ನಿರ್ಮಾಣವನ್ನು ಪ್ರಮುಖವಾಗಿ ಬಿಂಬಿಸುವ ಲೇಖನ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಹೊಸದಾಗಿ ಸ್ವತಂತ್ರಗೊಂಡ ಭಾರತದಲ್ಲಿ ಸೋಮನಾಥ ದೇವಾಲಯದ ಪುನರ್ ನಿರ್ಮಾಣವನ್ನು ರಾಷ್ಟ್ರೀಯ ಆತ್ಮ ವಿಶ್ವಾಸದ ಆರಂಭಿಕ ಅಭಿವ್ಯಕ್ತಿಗಳಲ್ಲಿ ಒಂದಾಗಿ ಉಲ್ಲೇಖಿಸುವ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ.

ದೇಶವು ಸೋಮನಾಥ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವಾಗ ಈ ಹೊತ್ತಿನಲ್ಲಿ ವಿರೋಧದ ನಡುವೆಯೇ  ಪುನರ್ ನಿರ್ಮಾಣಗೊಂಡ ದೇವಾಲಯವನ್ನು ಉದ್ಘಾಟಿಸಲಾಗಿತ್ತು ಎಂದು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು. ಈ ಮೈಲಿಗಲ್ಲು ಭಾರತದ ಸಾಂಸ್ಕೃತಿಕ ಪುನರುಜ್ಜೀವನ ಮತ್ತು ಹೆಮ್ಮೆಯ ಬೀಜಗಳನ್ನು ಬಿತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

”ರಾಷ್ಟ್ರವು ಸೋಮನಾಥ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ ಕೇಂದ್ರ ಸಚಿವರಾದ ಶ್ರೀ @PiyushGoyal ಸೋಮನಾಥ ದೇವಾಲಯದ ಪುನರ್ ನಿರ್ಮಾಣವನ್ನು ಹೊಸದಾಗಿ ಸ್ವಾತಂತ್ರ್ಯ ಪಡೆದ ಭಾರತದಲ್ಲಿ ರಾಷ್ಟ್ರೀಯ ಆತ್ಮ ವಿಶ್ವಾಸದ ಆರಂಭಿಕ ಅಭಿವ್ಯಕ್ತಿಗಳಲ್ಲಿ ಒಂದಾಗಿದೆ ಎಂದು ವಿವರಿಸಿದ್ದಾರೆ.

ಆ ದಿನದ ರಾಜಕೀಯ ಪಕ್ಷಗಳಿಂದ ವಿರೋಧವನ್ನು ಎದುರಿಸಿದರೂ ಪುನರ್ ನಿರ್ಮಾಣಗೊಂಡ ದೇವಾಲಯವನ್ನು ಉದ್ಘಾಟಿಸಲಾಗಿತ್ತು, ಇದು ಭಾರತದ ಸಾಂಸ್ಕೃತಿಕ ಪುನರುಜ್ಜೀವನ ಮತ್ತು ಹೆಮ್ಮೆಯ ಬೀಜಗಳನ್ನು ಬಿತ್ತಿತು ಎಂದು ಅವರು ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.’’

*****