Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಿ

ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಿ

ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಪತ್ರಿಕಾ ಮಂಡಳಿಯು ರಾಷ್ಟ್ರೀಯ ಪತ್ರಿಕಾ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡರು. ಈ ಸಂದರ್ಭವು ಭಾರತೀಯ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯ ಅಂಗವೂ ಆಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಪತ್ರಿಕಾ ಸ್ವಾತಂತ್ರ್ಯದ ಮಹತ್ವವನ್ನು ಪ್ರತಿಪಾದಿಸಿದರು, ಮತ್ತು ಮಾಧ್ಯಮಗಳು ಸ್ವಯಂ ನಿಯಂತ್ರಣದಲ್ಲಿರಬೇಕು ಎಂದು ಹೇಳಿದರು, ಹೊರಗಿನ ಹಸ್ತಕ್ಷೇಪ ಅಥವಾ ನಿಯಂತ್ರಣ ಪತ್ರಿಕೆಗಳಿಗೆ ಇರಬಾರದು ಎಂದೂ ಹೇಳಿದರು.

ದೇಶದ ಕೆಲವು ಪ್ರದೇಶಗಳಲ್ಲಿ ಇತ್ತೀಚೆಗೆ ಪತ್ರಕರ್ತರ ಹತ್ಯೆ ಆಗಿರುವ ಬಗ್ಗೆ ಪ್ರಧಾನಮಂತ್ರಿಯವರು ಕಳವಳ ವ್ಯಕ್ತಪಡಿಸಿದರು. ಸತ್ಯ ಶೋಧನೆ ಮಾಡಿ ಹೇಳುವ ಪತ್ರಕರ್ತರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ನಿಜಕ್ಕೂ ಗಂಭೀರ ಬೆಳವಣಿಗೆ ಎಂದು ಅವರು ಹೇಳಿದರು.

***