Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾರಾಣಸಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತದಿಂದ ಆದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿದು ಆಗಿರುವ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ.

“ವಾರಾಣಸಿಯಲ್ಲಿ ನಿರ್ಮಾಣಹಂತದಲ್ಲಿದ್ದ ಮೇಲ್ಸೇತುವೆ ಕುಸಿದು ಸಂಭವಿಸಿರುವ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಬಾಧಿತರಿಗೆ ಎಲ್ಲ ಸಾಧ್ಯ ನೆರವಿನ ಖಾತ್ರಿಪಡಿಸಲು ಸೂಚಿಸಿದ್ದೇನೆ.

ವಾರಾಣಸಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದಿರುವುದರಿಂದ ಆಗಿರುವ ಪರಿಸ್ಥಿತಿ ಕುರಿತಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೂ ನಾನು ಮಾತನಾಡಿದ್ದೇನೆ. ಯುಪಿ ಸರ್ಕಾರ, ಪರಿಸ್ಥಿತಿಯನ್ನು ಆಪ್ತವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ”, ಎಂದು ಪ್ರಧಾನಿ ಹೇಳಿದ್ದಾರೆ.

****