Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾರಾಣಸಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತದಲ್ಲಿ ಜೀವ ಕಳೆದುಕೊಂಡವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2018ರ ಮೇ 15ರಂದು ವಾರಾಣಸಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತದಲ್ಲಿ ಸಾವಿಗೀಡಾದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.

ವಾರಾಣಸಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿತದಲ್ಲಿ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ನೀಡಿಕೆಗೂ ಅವರು ಅನುಮೋದನೆ ನೀಡಿದ್ದಾರೆ.