Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರೊಂದಿಗೆ ಪ್ರಧಾನಮಂತ್ರಿ ಸಂವಾದ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರೊಂದಿಗೆ ಪ್ರಧಾನಮಂತ್ರಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಮ್ಮ ನಿವಾಸದಲ್ಲಿಂದು ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳನ್ನು ಬರಮಾಡಿಕೊಂಡರು. ಇದು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಇಂಥ ಎರಡನೇ ತಂಡವಾಗಿದೆ.

ಪ್ರಧಾನರುಗಳೊಂದಿಗೆ ಸಂವಾದ ನಡೆಸಿದ ಸಂದರ್ಭದಲ್ಲಿ ಪ್ರಧಾನಿಯವರು, ತಮ್ಮ ತಮ್ಮ ಗ್ರಾಮಗಳಲ್ಲಿ ಪ್ರತಿಯೊಂದು ಹೆಣ್ಣು ಮಗುವಿಗೂ ಶಿಕ್ಷಣ ದೊರಕುವಂತೆ ಮತ್ತು ಸ್ವಚ್ಛತೆ ಮತ್ತು ನೈರ್ಮಲ್ಯಕ್ಕಾಗಿ ಶ್ರಮಿಸುವಂತೆ ಉತ್ತೇಜಿಸಿದರು. ಬಾಲಕ ಮತ್ತು ಬಾಲಕಿಯರ ನಡುವೆ ಯಾವುದೇ ತಾರತಮ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು. ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಗತಿಯ ಸೋಪಾನ ಎಂದು ಹೇಳಿದರು.

ಪ್ರತಿ ಪ್ರಧಾನರೂ ಆಕೆ ಅಥವಾ ಆತನ ಅಧಿಕಾರದ ಅವಧಿಯಲ್ಲಿ ಶಾಶ್ವತ ಆಸ್ತಿಯಾಗಿ ಪರಿಣಮಿಸುವಂಥ ನಿರ್ದಿಷ್ಟ ಅಭಿವೃದ್ಧಿ ಉಪಕ್ರಮ ಕೈಗೊಂಡು ಅವುಗಳನ್ನು ಸಾಕಾರಗೊಳಿಸುವಂತೆ ಪ್ರಧಾನಿ ಕರೆ ನೀಡಿದರು.

***