Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳೊಂದಿಗೆ ಪ್ರಧಾನಿ ಸಂವಾದ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳೊಂದಿಗೆ ಪ್ರಧಾನಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ದೆಹಲಿಯ ತಮ್ಮ ನಿವಾಸದಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳನ್ನು ಬರಮಾಡಿಕೊಂಡರು. ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ವಾರಾಣಸಿ ಲೋಕಸಭಾ ಕ್ಷೇತ್ರದ ಪ್ರಧಾನರ ಮೂರನೇ ತಂಡ ಇದಾಗಿದೆ.

ಸಂವಾದದ ವೇಳೆ ಪ್ರಧಾನಮಂತ್ರಿಯವರು ಮಣ್ಣಿನ ಆರೋಗ್ಯ ಕಾರ್ಯ ಯೋಜನೆ, ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆಯಂಥ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಮ್ಮ ತಮ್ಮ ಗ್ರಾಮಗಳ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವಂತೆ ಪ್ರಧಾನರುಗಳನ್ನು ಹುರಿದುಂಬಿಸಿದರು.