Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳೊಂದಿಗೆ ಪ್ರಧಾನಿ ಸಂವಾದ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳೊಂದಿಗೆ ಪ್ರಧಾನಿ ಸಂವಾದ

ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳ ಪ್ರಧಾನರುಗಳೊಂದಿಗೆ ಪ್ರಧಾನಿ ಸಂವಾದ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ದೆಹಲಿಯ ತಮ್ಮ ನಿವಾಸದಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದ ಗ್ರಾಮಗಳಿಂದ ಆಗಮಿಸಿದ ಪ್ರಧಾನರುಗಳನ್ನು ಸ್ವಾಗತಿಸಿದರು. ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ವಾರಾಣಸಿ ಲೋಕಸಭಾ ಕ್ಷೇತ್ರದ ಪ್ರಧಾನರ ನಾಲ್ಕನೇ ತಂಡ ಇದಾಗಿದೆ.

ಸಂವಾದದ ವೇಳೆ ಪ್ರಧಾನಮಂತ್ರಿಯವರು ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಮತ್ತು ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಖಾತ್ರಿ ಪಡಿಸಿಕೊಳ್ಳುವತ್ತ ಶ್ರಮಿಸುವಂತೆ ಉತ್ತೇಜಿಸಿದರು. ತಮ್ಮ ತಮ್ಮ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಂತೆಯೂ ಅವರು ಪ್ರೇರೇಪಿಸಿದರು.
ಗಂಡು ಮತ್ತು ಹೆಣ್ಣುಮಕ್ಕಳ ನಡುವಿನ ಯಾವುದೇ ರೀತಿಯ ತಾರತಮ್ಯವನ್ನು ನಿರ್ಮೂಲನೆ ಮಾಡುವಂತೆ ಪ್ರಧಾನಮಂತ್ರಿಯವರು ಈ ಗುಂಪಿಗೆ ಆಗ್ರಹಿಸಿದರು.

***